Saturday, August 22, 2026

BDA Apartments

Home Front Page SSLC ಪರೀಕ್ಷೆ ಟಾಪರ್ಸ್  ಸನ್ಮಾನಿಸಿದ ಸಚಿವ ಹೆಚ್.ಸಿ ಮಹದೇವಪ್ಪ.

SSLC ಪರೀಕ್ಷೆ ಟಾಪರ್ಸ್  ಸನ್ಮಾನಿಸಿದ ಸಚಿವ ಹೆಚ್.ಸಿ ಮಹದೇವಪ್ಪ.

ಬೆಂಗಳೂರು,ಮೇ,14,2024 (www.justkannada.in): ಈ ಬಾರಿಯ SSLC ಪರೀಕ್ಷೆಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ಅವರನ್ನು  ಇಂದು ಸಮಾಜ ಕಲ್ಯಾಣ ಸಚಿವ ಡಾ ಹೆಚ್. ಸಿ ಮಹದೇವಪ್ಪ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನೂ ನೀಡುವುದಾಗಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಈ ವೇಳೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಪ್ರವೀಣ್ ಬಾಗೇವಾಡಿ, ಜಂಟಿ ನಿರ್ದೇಶಕರಾದ ನಾಗೇಶ್, ಸಹಾಯ ನಿರ್ದೇಶಕರಾದ ಸಿ ಎಂ ಹೊನ್ನರಾಜು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ವೇಳೆ ಉಪಸ್ಥಿತರಿದ್ದರು.

Key words: Minister, HC Mahadevappa, SSLC exam, toppers