Friday, September 18, 2026

BDA Apartments

Home Front Page ಸಿದ್ದರಾಮಯ್ಯ ಬಗ್ಗೆ ಹೆಚ್.ವಿಶ್ವನಾಥ್ ಲಘುವಾಗಿ ಮಾತನಾಡಿದ್ದು ಸರಿಯಲ್ಲ- ಡಿಸಿಎಂ ಪರಮೇಶ್ವರ್…

ಸಿದ್ದರಾಮಯ್ಯ ಬಗ್ಗೆ ಹೆಚ್.ವಿಶ್ವನಾಥ್ ಲಘುವಾಗಿ ಮಾತನಾಡಿದ್ದು ಸರಿಯಲ್ಲ- ಡಿಸಿಎಂ ಪರಮೇಶ್ವರ್…

ಬೆಂಗಳೂರು,ಮೇ,13,2019(www.justkannada.in): ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ ಎಂದು ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೈತ್ರಿ ಮುಂದುವರೆಯಬೇಕಾದರೇ ಇಂತಹ ಹೇಳಿಕೆಗಳನ್ನ ಕೊಡಬಾರದು. ಇನ್ನು ಮುಂದೆ  ಈ ರೀತಿ ಹೇಳಿಕೆ ಕೊಡಬೇಡಿ. ಈ ಸಂಬಂಧ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರು ಯಾಕೆ ಮೌನ ವಹಿಸಿದ್ದಾರೆ ಗೊತ್ತಿಲ್ಲ.  ಕೇಲವೊಮ್ಮೆ ಉದ್ದೇಶಪೂರ್ವಕ ಮೌನ ರಾಜಕೀಯಕ್ಕೂ ಒಳ್ಳೆಯದಾಗಬಹುದು ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮತ್ತು ಸಿದ್ದರಾಮಯ್ಯನವರು ಒಂದೇ ಜಿಲ್ಲೆಯವರು. ಅವರಿಬ್ಬರ ಮಧ್ಯೆ ವೈಯಕ್ತಿಕವಾಗಿ ಸ್ವಲ್ಪ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಜಕೀಯವಾಗಿ ನಾವು ಒಟ್ಟಿಗೆ ಇರಬೇಕಾಗುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷರ ವಿರುದ್ಧ ಲಘುವಾಗಿ ಮಾತನಾಡಬಾರದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಇನ್ನು ನಾವೇನು ಯಾರ ಮನೆ ಬಾಗಿಲಿಗೆ ಹೋಗಿಲ್ಲ. ಅವರೇ ಸಿಎಂ ಮಾಡಿದ್ದು,  ಕಾಂಗ್ರೆಸ್ ಪಕ್ಷದವರಿಗೆ ಕಷ್ಟ ಆದರೆ ಅವರ ದಾರಿ ನೋಡಿಕೊಳ್ಳಲಿ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿಗೆ ತಿರುಗೇಟು ನೀಡಿದ ಪರಮೇಶ್ವರ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ವರಿಷ್ಠ ದೇವೇಗೌಡರು ಮಾತುಕತೆ ನಡೆಸಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ತಂದಿದ್ದಾರೆ ಹೊರತು ಅವರು ತಂದಿಲ್ಲ ಎಂದರು.

Key words: H Vishwanath – spoken – about- Siddaramaiah – DCM Parameshwar.