Monday, September 14, 2026

BDA Apartments

Home Front Page ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ಮೈಸೂರು, ಮೇ 16, 2024 (www.justkannada.in): ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ರಂಗೇರುತ್ತಿದ್ದು, ಇಂದು ಕಾಂಗ್ರೆಸ್-ಬಿಜೆಪಿ ಹಾಗೂ ಜೆಡಿಎಸ್ ನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಮೈಸೂರಿನ ಪ್ರಾದೇಶಿಕ ಅಯುಕ್ತರ ಕಚೇರಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಶಾಸಕ ಜಿಡಿ ಹರೀಶ್ ಗೌಡ, ಶ್ರೀವತ್ಸ, ಮಾಜಿ ಸಚಿವ ಸಾರಾ ಮಹೇಶ್ ಇತರರು ಇದ್ದರು.

ನೈರುತ್ಯ ಪದವೀಧರರ  ಕ್ಷೇತ್ರದಿಂದ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ತನ್ವೀರ್ ಸೇಠ್ ಇತರರು ಇದ್ದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ ಕೆ ಮಂಜುನಾಥ್ ಮತ್ತೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು.  ನೈರುತ್ಯ ಪದವಿಧರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ಧನಂಜಯ ಸರ್ಜಿ ಅವರು ನಾಮಪತ್ರ ಸಲ್ಲಿಸಿದರು.