Sunday, September 20, 2026

BDA Apartments

ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲು BDA JK_Adv BDA Adv
Home Crime ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲು.

ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲು.

ಕೊಲ್ಹಾಪುರ, ಮೇ, 18,2024 (www.justkannada.in): ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು  ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲು death

ತೀರ್ಥಯಾತ್ರೆಗೆ ತೆರಳುತಿದ್ದ ನಾಲ್ವರು ನಿನ್ನೆ ರಾತ್ರಿ ಆನೂರು ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ತಂಗಿದ್ದರು. ಬೆಳಿಗ್ಗೆ ಪಕ್ಕದ ಗ್ರಾಮ ಬಸ್ತೆವಾಡದಲ್ಲಿನ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಇಬ್ಬರು ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾರೆ. ಇವರನ್ನು ಕಾಪಾಡಲು ಮತ್ತಿಬ್ಬರು ಹೋಗಿದ್ದು,  ಈ ಸಂದರ್ಭದಲ್ಲಿ ನಾಲ್ವರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Key words: Four -people – river-death