Saturday, August 8, 2026

BDA Apartments

Home Front Page ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಇನ್ನು ನಿರ್ಧರಿಸಿಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಇನ್ನು ನಿರ್ಧರಿಸಿಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಬೆಂಗಳೂರು,ಸೆ,18,2019(www.justkannada.in):  ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ಇಡಿ ವಿಚಾರಣೆಗೆ ಹಾಜರಾಗುವ ಬಗ್ಗೆ ಇನ್ನು ನಿರ್ಧರಿಸಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಇಡಿ ಅಧಿಕಾರಿಗಳಿಂದ ಸೆ.14ರಂದೇ ನನಗೆ ಸಮನ್ಸ್ ಬಂದಿತ್ತು. ಆದರೇ ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೇ ಇದೀಗ ಮತ್ತೆ ನೀಡಲಾಗಿದೆ. ಸೆಪ್ಟಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ  ತಿಳಿಸಿದ್ದಾರೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಅದನ್ನು ಬಿಟ್ಟು ಡಿಕೆ ಶಿವಕುಮಾರ್ ಅವರ ಯಾವುದೇ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ. ಇಡಿ ಸಮನ್ಸ್ ಬಂದಿದೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಬಗ್ಗೆ ನಿರ್ಧರಿಸಿಲ್ಲ. ನಮ್ಮ ವಕೀಲರು ಹೇಳಿದಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

 

Key words: No decision – attending -ED -hearing – MLA  Lakshmi Hebbalkar