Saturday, August 8, 2026

BDA Apartments

Home Front Page ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್

ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಮೇ,28,2024 (www.justkannada.in):  ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.

ಇಬ್ಬರು ನಾಯಕರು ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಆಕಾಂಕ್ಷಿಗಳ ಪಟ್ಟಿ ಸಮೇತ ದೆಹಲಿಗೆ ತೆರಳಿದ್ದು,  ಹೈಕಮಾಡ್ ನಾಯಕರನ್ನ ಭೇಟಿಯಾಗಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ.

ಹೈಕಮಾಂಡ್ ನಾಯಕರನ್ನ ಭೇಟಿಯಾಗುವ ನಾಯಕರು ಇಂದು ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇನ್ನು ವಿಧಾನಪರಿಷತ್ 7 ಸ್ಥಾನಗಳಿಗೆ ಕಾಂಗ್ರೆಸ್ ನಲ್ಲಿ ಹೆಚ್ಚಿನ ಆಕಾಂಕ್ಷಿಗಳಿದ್ದುಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿದ್ದಾರೆ.

Key words: CM, Siddaramaiah, DCM, DK Shivakumar, Delhi