Friday, September 11, 2026

BDA Apartments

Home Front Page ವಾಪಸ್ ಆಗಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ: ನಾಳೆ ಆಗಮನ.

ವಾಪಸ್ ಆಗಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ: ನಾಳೆ ಆಗಮನ.

ಬೆಂಗಳೂರು ,ಮೇ,292,2024 (www.justkannada.in): ತನ್ನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ವಿದೇಶಕ್ಕೆ ತೆರಳಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್ ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.

ಈ ಬೆನ್ನಲ್ಲೆ ಇದೀಗ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲು ಟಿಕೆಟ್ ಬುಕ್ ಮಾಡಿದ್ದು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಲುಪ್ತಾನ್ಸಾ ಫ್ಲೈಟ್  ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆ.

ನಾಳೆ ಮಧ್ಯಾಹ್ನ 1.30 ಕ್ಕೆ ಫ್ರಾಂಕ್ ಫರ್ಟ್ ನಿಂದ ವಿಮಾನ  ಹೊರಡಲಿದ್ದು, ರಾತ್ರಿ 12.30 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.  ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್ ಐಟಿ ತಂಡ ಕಾದು ಕುಳಿತಿದ್ದು ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಪ್ರಜ್ವಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯಲಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಮಾತನಾಡಿದ್ದ ಪ್ರಜ್ವಲ್ ರೇವಣ್ಣ ಮೇ 31 ರಂದು ಭಾರತಕ್ಕೆ ಆಗಮಿಸಿ ಎಸ್ ಐಟಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು.

Key words: Prajwal Revanna, booked, ticket, return