Saturday, August 22, 2026

BDA Apartments

Home Election 2024 ಲೋಕಸಭೆ ಚುನಾವಣೆ: ಸುನೀಲ್ ಬೋಸ್, ಶೆಟ್ಟರ್, ಬೊಮ್ಮಾಯಿಗೆ ಗೆಲುವು: ಶ್ರೀರಾಮುಲುಗೆ ಸೋಲು

ಲೋಕಸಭೆ ಚುನಾವಣೆ: ಸುನೀಲ್ ಬೋಸ್, ಶೆಟ್ಟರ್, ಬೊಮ್ಮಾಯಿಗೆ ಗೆಲುವು: ಶ್ರೀರಾಮುಲುಗೆ ಸೋಲು

ಬೆಂಗಳೂರು,ಜೂನ್,4,2024 (www.justkannada.in):  ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು ರಾಜ್ಯದಲ್ಲಿ ಬಿಜೆಪಿ 16 ಕಾಂಗ್ರೆಸ್ 10 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮಧ್ಯೆ ಹಲವು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು ಕೆಲವರ ಗೆಲುವು ಬಹುತೇಕ ಖಚಿತವಾಗಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಿಂದ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್  1.9 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಮೈಸೂರು ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ದ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಜಯಭೇರಿ ಬಾರಿಸಿದರೇ ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು, ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ,  ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ.

ಹಾಗೆಯೇ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪಗೆ ಸೋಲುಣಿಸಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆದ್ದು ಬೀಗಿದ್ದಾರೆ.  ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ 1 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದರೇ ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ.

ಇನ್ನು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಮುಖಭಂಗವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಗೆಲುವು ಸಾಧಿಸಿದ್ದಾರೆ.

Key words: Lok Sabha-Elections-BJP-congress-JDS