Friday, August 21, 2026

BDA Apartments

Home Front Page ನೆರೆ ಪರಿಹಾರ ಒದಗಿಸುವಲ್ಲಿ ವಿಫಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ….

ನೆರೆ ಪರಿಹಾರ ಒದಗಿಸುವಲ್ಲಿ ವಿಫಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ….

ಬೆಂಗಳೂರು,ಸೆ,18,2019(www.justkannada.in): ಪ್ರವಾಹ ಹಾಗೂ ಬರಪೀಡಿತ ಪ್ರದೇಶಗಳಿಗೆ ನೆರವು ಒದಗಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ  ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಮುಂಭಾಗದಲ್ಲಿರುವ ಮಹಾತ್ಮಾ ಗಾಂಧಿ ಅವರ ಪುತ್ತಳಿ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ನೆರೆ ಹಾವಳಿಯಿಂದ ಸಾಕಷ್ಟು ನಷ್ಟ ಉಂಟಾಗಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರವಾಹ ಹಾಗೂ ಬರಪೀಡಿತ ಪ್ರದೇಶಗಳಿಗೆ ನೆರವು ಒದಗಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಪ್ರತಿಭಟನೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರುಗಳಾದ ಕೆ. ಜೆ ಜಾರ್ಜ್,  ಹೆಚ್. ಕೆ ಪಾಟೀಲ್ , ಯು.ಟಿ ಖಾದರ್,  ಕೃಷ್ಣಭೈರೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ನಾಯಕರು ಭಾಗಿಯಾಗಿದ್ದರು.

Key words: Failure – provide flood relief- Congress –protests- against -central – state government