Sunday, August 23, 2026

BDA Apartments

Home Front Page ಚನ್ನಪಟ್ಟಣ ಉಪಚುನಾವಣೆ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್

ಚನ್ನಪಟ್ಟಣ ಉಪಚುನಾವಣೆ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಜೂನ್,19,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಉಪ ಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿಸಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದಿದ್ದಾರೆ.

ಚನ್ನಪಟ್ಟಣ ನನಗೆ ರಾಜಕೀಯವಾಗಿ ಜನ್ಮ ನೀಡಿದ ಕ್ಷೇತ್ರ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲಿಸಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ, ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಸಹೋದರ ಡಿ.ಕೆ. ಸುರೇಶ್ ಅವರ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಈ ಕುರಿತು  ಇನ್ನೂ ತೀರ್ಮಾನ ಆಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ’ ಎಂದರು.

Key words: Channapatna, by-election, DK Shivakumar, contest