Sunday, September 6, 2026

BDA Apartments

Home Front Page ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು,ಜೂನ್,26,2024 (www.justkannada.in): ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಬೀಳುತ್ತಿದ್ದು ಈ ನಡುವೆ ಮೂರು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ.

ಜೂನ್ 29 ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲ್ಬುರ್ಗಿ, ರಾಯಚೂರು, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Heavy rain – likely – state -three days