Saturday, September 5, 2026

BDA Apartments

Home Front Page ಲೋಕಸಭೆ ಸ್ಫೀಕರ್ ಆಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ಲೋಕಸಭೆ ಸ್ಫೀಕರ್ ಆಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ನವದೆಹಲಿ,ಜೂನ್,26,2024 (www.justkannada.in):  18ನೇ ಲೋಕಸಭೆಯ ಸ್ಪೀಕರ್‌ ಆಗಿ  ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಭ್ಯರ್ಥಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಕಾರಣ ದಶಕಗಳಲ್ಲಿ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಿತು.

ಪ್ರತಿಪಕ್ಷಗಳು ಕಾಂಗ್ರೆಸ್ ನಾಯಕ ಕೆ ಸುರೇಶ್ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲು ಪ್ರಸ್ತಾವನೆಯನ್ನು ಮಂಡಿಸಿದ್ದವು. ಆದರೆ ಧ್ವನಿ ಮತದ ನಂತರ ಸದನವು ಪಿಎಂ ಮೋದಿ ಅವರ ಪ್ರಸ್ತಾಪವನ್ನು ಅಂಗೀಕರಿಸಿದ ನಂತರ ಅವರನ್ನು ತಿರಸ್ಕರಿಸಲಾಯಿತು.

ಈ ಮೂಲಕ ಸತತ 2ನೇ ಬಾರಿಗೆ ಲೋಕಸಭೆ ಸ್ಪೀಕರ್ ಆಗಿ ಓ ಬಿರ್ಲಾ ಆಯ್ಕೆಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದರು.

Key words: Om Birla, elected, Lok Sabha, Speaker