Friday, September 18, 2026

BDA Apartments

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜು.8ರವರೆಗೆ ನ್ಯಾಯಾಂಗ ಬಂಧನ BDA JK_Adv BDA Adv
Home Crime ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜು.8ರವರೆಗೆ ನ್ಯಾಯಾಂಗ ಬಂಧನ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜು.8ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಜೂನ್,29,2024 (www.justkannada.in):  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ   ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ 4ನೇ ಪ್ರಕರಣದಲ್ಲಿ ತಮ್ಮ ವಶಕ್ಕೆ ಪಡೆದಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜುಲೈ 8ರವಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜು.8ರವರೆಗೆ ನ್ಯಾಯಾಂಗ ಬಂಧನ prajwal revanna

ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವಂತೆ ಅವರ ಪರ ವಕೀಲ ಅರುಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತು. ಈ ಮಧ್ಯೆ ಮನವಿ ಪತ್ರ ಸಿದ್ದಪಡಿಸಿ ಪ್ರಜ್ವಲ್ ರೇವಣ್ಣಗೆ ವಕೀಲರು ನೀಡಿದ್ದು ಜೈಲಿಗೆ ಹೋದಾಗ ನೀಡುವಂತೆ ಸೂಚಿಸಿದರು. ಜೈಲು ಅಧಿಕಾರಿಗಳು ಅವಕಾಶ ನೀಡಿದ್ದಲ್ಲಿ ಸೋಮವಾರ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

Key words: Former MP, Prajwal Revanna, judicial custody