Sunday, September 13, 2026

BDA Apartments

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲ...
Home Front Page ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

online application invited for OBC student to join hostel

ಬೆಂಗಳೂರು, ಜೂನ್. 2̧9̄,2024: (www.justkannada.in news) ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 1.00 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ       ರೂ. 44,500/- ಮಿತಿಯಲ್ಲಿ ಇರಬೇಕು. ವಿದ್ಯಾರ್ಥಿಗಳು ವೆಬ್ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.     ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು  ಜುಲೈ 10 ಕೊನೆಯ ದಿನ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ  ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words: online application, invited for, OBC student, to join hostel