Thursday, September 10, 2026

BDA Apartments

Home Front Page ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ

ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ: ಮೈಸೂರು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ

ಮೈಸೂರು,ಜುಲೈ,9,2024 (www.justkannada.in):  ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.

ಮೈಸೂರಿನ ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್, ಡೆಂಗ್ಯೂ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಯ ವಾರ್ಡ್ ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಸಂಸದ ಯದುವೀರ್ ಗೆ ಮಾಜಿ ಶಾಸಕ ಎಲ್ ನಾಗೇಂದ್ರ, ಡಿಹೆಚ್ಓ ಡಾ ಕುಮಾರಸ್ವಾಮಿ ಸಾಥ್ ನೀಡಿದರು.

ಬಳಿಕ ಮಾತನಾಡಿದ ಅವರು, ಮೈಸೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದೇನೆ. ನಮ್ಮ ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡೆಂಗ್ಯೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ಮಾಡಬೇಕೆಂದು ಅಂದುಕೊಟ್ಟಿದ್ದೇವೆ. ಜಿಲ್ಲಾಸ್ಪತ್ರೆಗೆ ಅಗತ್ಯ ಸಲಕರಣೆಗಳ ಕೊರತೆ ಇದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Key words: Dengue, MP, Yaduveer,  visits, Mysore, district hospital