Friday, August 14, 2026

BDA Apartments

Home Front Page ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ರಸ್ತೆಗಿಳಿದು ಸುರಕ್ಷತೆ ಪರೀಕ್ಷಿಸಿ: ಸಿಎಂ ಸಿದ್ದರಾಮಯ್ಯ ಖಡಕ್...

ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ: ರಸ್ತೆಗಿಳಿದು ಸುರಕ್ಷತೆ ಪರೀಕ್ಷಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು,ಜುಲೈ,8,2024 (www.justkannada.in): ರಾಜ್ಯದಲ್ಲಿ ಅಪಘಾತಗಳಲ್ಲಿ ಸಾವುನೋವು ಹೆಚ್ಚುತ್ತಿದ್ದು, ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ.  ನೀವು ರಸ್ತೆಗಿಳಿದು ಸುರಕ್ಷತೆ ಪರೀಕ್ಷಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಂಯ್ಯ ಖಡಕ್ ಸೂಚನೆ ನೀಡಿದರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಗರಂ ಆದ ಸಿಎಂ ಸಿದ್ದರಾಮಯ್ಯ,  ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ.  ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ. ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗೀತಾ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ.  ಹಾಟ್‌ಸ್ಟಾಟ್‌ ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದರು.

Key words: increase, accidents, CM, Siddaramaiah, instruct