Saturday, August 22, 2026

BDA Apartments

Home Front Page ಹೆಚ್.ವಿಶ್ವನಾಥ್ ಹೇಳಿಕೆ  ಕುರಿತು ಬಹಿರಂಗ ಚರ್ಚೆ ಸರಿಯಲ್ಲ: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ –ಮಾಜಿ ಸಿಎಂ...

ಹೆಚ್.ವಿಶ್ವನಾಥ್ ಹೇಳಿಕೆ  ಕುರಿತು ಬಹಿರಂಗ ಚರ್ಚೆ ಸರಿಯಲ್ಲ: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ –ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ…

ಹುಬ್ಬಳ್ಳಿ,ಮೇ,14,2019(www.justkannada.in):  ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಮಾಜಿಸಿಎಂ ಸಿದ್ದರಾಮಯ್ಯ ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಹೀಗಾಗಿ ಈ ಬಗ್ಗೆ ಯಾವುದೇ ಬಹಿರಂಗ ಚರ್ಚೆ ಬೇಡ ಎಂದು ಹೇಳಿದ್ದಾರೆ.

ಬಿಜೆಪಿ ಶಾಶಕರು ನಮ್ಮ ಸಂಪರ್ಕದಲ್ಲಿ…

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಗಲು ಗನಸು ಕಾಣುತ್ತಿದ್ದಾರೆ. ಅವರು ಹೇಳಿದ್ದನ್ನೇ 10 ಬಾರಿ ಹೇಳುತ್ತಿದ್ದಾರೆ. ಅವರ ಹೇಳಿಕೆಯನ್ನ ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

ಹಾಗೆಯೇ ಸಿದ್ದರಾಮಯ್ಯ ಮತ್ತೆ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನರು ಆಶೀರ್ವಾದ ಮಾಡಿದರೇ ನಾನು ಸಿಎಂ ಆಗಬಾರದಾ…? ಜನರು ಅಭಿಮಾನದಿಂದ ಹೇಳುತ್ತಾರೆ ಅದು ತಪ್ಪಾ..? ಜನರ ಬಾಯಿ ಮುಚ್ಚಿಸಲು ಆಗುತ್ತಾ ಎಂದು ಪ್ರಶ್ನಿಸಿದರು.

Key words: Disclosure –H. Vishwanath- statement  -Former CM- Siddaramaiah