Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ವಾಲ್ಮೀಕಿ ನಿಗಮ ಹಗರಣ: ಬಸನಗೌಡ ದದ್ದಲ್, ಬಿ. ನಾಗೇಂದ್ರ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

ವಾಲ್ಮೀಕಿ ನಿಗಮ ಹಗರಣ: ಬಸನಗೌಡ ದದ್ದಲ್, ಬಿ. ನಾಗೇಂದ್ರ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

ಬೆಂಗಳೂರು,ಜುಲೈ,10,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ  ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಶಾಸಕ ಬಸನಗೌಡ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ವಾಲ್ಮೀಕಿ ನಿಗಮ ಹಗರಣ: ಬಸನಗೌಡ ದದ್ದಲ್, ಬಿ. ನಾಗೇಂದ್ರ ಮನೆ ಮೇಲೆ ಇಡಿ ದಾಳಿ, ಪರ...

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ, ಬಸನಗೌಡ ದದ್ದಲ್​​ ರನ್ನು ಎಸ್ ಐಟಿ ಅಧಿಕಾರಿಗಳು ನಿನ್ನೆ ವಿಚಾರಣೆಗೊಳಪಡಿಸಿದ್ದರು.

Key words: Basanagowda Daddal, B.Nagendra, house, ED