Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ- ಗೃಹ ಸಚಿವ ಡಾ.ಜಿ....

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ- ಗೃಹ ಸಚಿವ ಡಾ.ಜಿ. ಪರಮೇಶ್ವರ್

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,10,2024 (www.justkannada.in): ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪರಮೇಶ್ವರ್, ಪ್ರಕರಣದಲ್ಲಿ ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.  ಈ ಮಧ್ಯೆ ಇಡಿ ಅಧೀಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಇಡಿ ಅಧಿಕಾರಿಗಳು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದರು.ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು, ಬಳ್ಳಾರಿ, ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ. ಬಸನಗೌಡ ದದ್ದಲ್ ನಿವಾಸದ ಮೇಲೆ ಶಾಸಕರ ಭವನದ ಮೇಲೆ ಇಡಿ ದಾಳಿಯಾಗಿದೆ.

Kew words: Valmiki Corporation, illegal, case, ED, Minister, Dr.G. Parameshwar