Sunday, August 9, 2026

BDA Apartments

Home Front Page ನಾಳೆ ಮೊದಲ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ದತೆ, ಪೊಲೀಸ್ ಬಿಗಿಬಂದೋಬಸ್ತ್

ನಾಳೆ ಮೊದಲ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ದತೆ, ಪೊಲೀಸ್ ಬಿಗಿಬಂದೋಬಸ್ತ್

ಮೈಸೂರು,ಜುಲೈ,11,2024 (www.justkannada.in): ನಾಳೆ ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ದತೆ ಭರದಿಂದ ಸಾಗಿದೆ.

ನಾಳೆ ನಾಡಿನ‌ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಲಗ್ಗೆ ಇಡಲಿದ್ದು,  ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರು, ಉಪಾಹಾರ, ಪ್ರಸಾದ ವಿತರಣೆ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನ ಒದಗಿಸಲು  ಸಿದ್ದತೆ ನಡೆಸಲಾಗುತ್ತಿದೆ.

ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದ್ದು, ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ದೇವಸ್ಥಾನದ ಸುತ್ತ  ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

Key words: Ashada Friday, prepare, Chamundi Hill