Thursday, August 6, 2026

BDA Apartments

Home Front Page ಮೈಸೂರು ಪತ್ರಕರ್ತರು ಮತ್ತು ಕುಟುಂಬದ ಸದಸ್ಯರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಣೆ…

ಮೈಸೂರು ಪತ್ರಕರ್ತರು ಮತ್ತು ಕುಟುಂಬದ ಸದಸ್ಯರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಣೆ…

ಮೈಸೂರು,ಸೆ,20,2019(www.justkannada.in):  ಮೈಸೂರು ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕ್ಷೇಮಾಭಿಯಾನದ ಹೆಲ್ತ್ ಕಾರ್ಡ್ ಉಚಿತವಾಗಿ ವಿತರಣೆ ಮಾಡಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಶ್ರೀ ರಾಜಶೇಖರ ಕೋಟಿ ಸಭಾಂಗಣದಲ್ಲಿ  ಕರ್ನಾಟಕ ಸರ್ಕಾರ ಸಹಕಾರದೊಂದಿಗೆ   ಆಯುಷ್ಮಾನ್ ಯೋಜನೆಗೆ ನಟಿ ರೂಪಾ ಅಯ್ಯರ್ ಚಾಲನೆ ನೀಡಿದರು. ಬಳಿಕ ಪತ್ರಕರ್ತರು ಮತ್ತು ಕುಟುಂಬದವರಿಗೆ ಹೆಲ್ತ್ ಕಾರ್ಡ್ ಅನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಆಯುಷ್ಮಾನ್ ಯೋಜನೆ ಕಾರ್ಡ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿ.ಕೆ.ಮಹೇಂದ್ರ ,ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ಸಂಘದ ಕಾರ್ಯಕಾರಿ ಸದಸ್ಯರು ಭಾಗವಹಿಸಿದ್ದರು.

Key words: Free Health Card -Distribution – Mysore Journalists – Family Members.