Monday, September 28, 2026

BDA Apartments

ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ BDA JK_Adv BDA Adv
Home Crime ಪೋಕ್ಸೋ ಕೇಸ್:  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್

ಪೋಕ್ಸೋ ಕೇಸ್:  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್

ಬೆಂಗಳೂರು,ಜುಲೈ,12,2024 (www.justkannada.in):  ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು  ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಗೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಪ್ರಕರಣದ ಇತರೇ ಆರೋಪಿಗಳಿಗೂ ಖುದ್ಧು ಹಾಜರಾತಿಯಿಂದ  ಹೈಕೋರ್ಟ್ ವಿನಾಯಿತಿ ನೀಡಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಪೋಕ್ಸೋ ಕೇಸ್ bsy

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಅರ್ಜಿ ವಿಚಾರಣೆಯನ್ನು ಜುಲೈ 26ರವರೆಗೆ ಮುಂದೂಡಿದ್ದು,  ಅಲ್ಲಿಯವರೆಗೂ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

Key words: POCSO, case, Relief, BS Yeddyarappa