Sunday, August 23, 2026

BDA Apartments

Home Front Page ಇಡಿ ಅಧಿಕಾರಿಗಳ ವಿರುದ್ದದ ಎಫ್ ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಇಡಿ ಅಧಿಕಾರಿಗಳ ವಿರುದ್ದದ ಎಫ್ ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು,ಜುಲೈ,23,2024 (www.justkannada.in):  ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ದ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ದ  ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಇಡಿ   ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ಇದೀಗ  ಇಡಿಯ ಡೆಪ್ಯೂಟಿ ಡೈರೆಕ್ಟರ್ , ಅಸಿಸ್ಟೆಂಟ್  ಡೈರೆಕ್ಟರ್ ವಿರುದ್ದದ ಪ್ರಕರಣಕ್ಕೆ  ಹೈಕೋರ್ಟ್ ನ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ತಡೆ ನೀಡಿದೆ. ಇಡಿ ಅಧಿಕಾರಿಗಳ ವಿರುದ್ದ ತನಿಖೆಗೆ ತಡೆಯಾಜ್ಞೆ ನೀಡಿದೆ.

ಅಲ್ಲದೆ ಆಕ್ಷೇಪಣೆ  ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವ ಹೈಕೋರ್ಟ್ ವಿಚಾರಣೆಯನ್ನ ಆಗಸ್ಟ್ 21ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಮೂಲಕ ಸರ್ಕಾರದ ಕಾನೂನು ಹೋರಾಟಕ್ಕೆ ಹಿನ್ನಡೆಯಾಗಿದೆ.

Key words: High Court, stays, FIR, against, ED officials