Tuesday, September 29, 2026

BDA Apartments

Home Front Page ದೇಶದ, ನೆಲದ ಕಾನೂನಿಗೆ ಎಲ್ಲರೂ ತಲೆಬಾಗಬೇಕು-ನಟ ದರ್ಶನ್ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ದೇಶದ, ನೆಲದ ಕಾನೂನಿಗೆ ಎಲ್ಲರೂ ತಲೆಬಾಗಬೇಕು-ನಟ ದರ್ಶನ್ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ರಾಮನಗರ, ಜುಲೈ 24,2024 (www.justkannada.in): ದೇಶದ, ನೆಲದ ಕಾನೂನಿಗೆ ಎಲ್ಲರೂ ತಲೆಬಾಗಬೇಕು. ನಟ ದರ್ಶನ್ ಗೆ ಅನ್ಯಾಯವಾಗಿದ್ದರೇ ಸರಿಪಡಿಸಲು ಪ್ರಯತ್ನಿಸುತ್ತೇನೆ ಎಂದು ಡಿಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್​ ಭಾಗಿಯಾಗಿ ಭಾಷಣದ ವೇಳೆ ನಟ ದರ್ಶನ ಅಭಿಮಾನಿಗಳು ಡಿ ಬಾಸ್, ಡಿ ಬಾಸ್​ ಎಂದು ಕೂಗಲು ಆರಂಭಿಸಿದರು.ದೇಶದ dks-dk-shivakumar dks dk shivakumar

​ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್​, ನಟ ದರ್ಶನ ಪತ್ನಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ತಿಳಿಸಿದರು.

ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುವೆ. ಆದರೆ ನಾವು ದೇಶದ, ನೆಲದ ಕಾನೂನಿಗೆ ಗೌರವ ಕೊಡಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದರು.

Key words: DK Shivakumar, reaction, actor, Darshan