Sunday, August 23, 2026

BDA Apartments

Home Front Page 15 ಅನರ್ಹ ಶಾಸಕರ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್…

15 ಅನರ್ಹ ಶಾಸಕರ  ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್…

ಬೆಂಗಳೂರು ,ಸೆ,21,2019(www.justkannada.in):  ರಾಜ್ಯದ 15 ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ.

ಆಕ್ಟೋಬರ್ 21 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.  ರಾಜ್ಯದ 15 ಕ್ಷೇತ್ರಗಳಲ್ಲಿ ಅ. 21 ರಂದು ಉಪಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 23 ಕ್ಕೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್. 24 ರಂದು ಫಲಿತಾಂಶ ಹೊರಬೀಳಲಿದೆ.

ಇನ್ನು ಆರ್.ಆರ್ ನಗರ ಮತ್ತು ಮಸ್ಕಿ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗಿಲ್ಲ. ಎರಡು ಕ್ಷೇತ್ರಗಳನ್ನ ಬಿಟ್ಟು ಹುಣಸೂರು, ಕೆ.ಆರ್ ಪೇಟೆ, ಕೆ.ಆರ್ ಪುರ, ಯಲ್ಲಾಪುರ ರಾಣಿಬೆನ್ನೂರು. ಹಿರೇಕೆರೂರು, ಅಥಣಿ, ಕಾಗವಾಡ, ಯಶವಂತಪುರ ಸೇರಿ 15 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.  ಈ ಮೂಲಕ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಎದುರಾಗಿದೆ.

Key words: 15 Assembly constituency -byelection –date fix