Friday, August 14, 2026

BDA Apartments

Home Front Page ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ದರ್ಶನ್ ಪತ್ನಿ ಮತ್ತು ಸಹೋದರ

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ದರ್ಶನ್ ಪತ್ನಿ ಮತ್ತು ಸಹೋದರ

ಬೆಂಗಳೂರು,ಜುಲೈ, 24, 2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದು ಈ ಮಧ್ಯೆ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್‌ ತೂಗುದೀಪ್‌ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ  ಮಾತುಕತೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ  ಭೇಟಿ ನೀಡಿದ ವಿಜಯಲಕ್ಷ್ಮಿ ಮತ್ತು ದನಿಕರ್ ತೂಗದೀಪ್ ಅವರು ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ದರ್ಶನ್ ಜೈಲಿಗೆ ಹೋಗಿ ತಿಂಗಳಾಗಿದೆ, ಇನ್ನೂ ಬೇಲ್​ ಸಿಕ್ಕಿಲ್ಲ. ಹೀಗಾಗಿ ಕಾನೂನಿ ಅಡಿಯಲ್ಲಿ ಏನಾದರೂ ಸಹಾಯ ಮಾಡಿ ಎಂದು ಡಿಕೆ ಶಿವಕುಮಾರ್ ಬಳಿ ವಿಜಯಲಕ್ಷ್ಮೀ  ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ರಾಮನಗರದಲ್ಲಿ ನಿನ್ನೆ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ದ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದರು. ಈ ವೇಳೆ ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿ.ಕೆ.ಶಿವಕುಮಾರ್ ನಾಳೆ ಮಾತನಾಡುವುದಾಗಿ ತಿಳಿಸಿದ್ದರು.

Key words: Actor Darshan,  wife, brother, met, DCM, DK Shivakumar