Thursday, September 10, 2026

BDA Apartments

Home Front Page ಗೊಡ್ಡು ಬೆದರಿಕೆ ಮೂಲಕ ನಮ್ಮ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ

ಗೊಡ್ಡು ಬೆದರಿಕೆ ಮೂಲಕ ನಮ್ಮ ಪಾದಯಾತ್ರೆ ಹತ್ತಿಕ್ಕಲು ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ

ಬೆಂಗಳೂರು, ಜುಲೈ 29,2024 (www.justkannada.in):  ಮುಡಾ ಹಗರಣ ವಿರುದ್ದ ಕೈಗೊಂಡಿರುವ ಪಾದಯಾತ್ರೆಯನ್ನ ಹತ್ತಿಕ್ಕಲು ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯನವರೇ, ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ  ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,   ಬಿಜೆಪಿ ವಾಲ್ಮೀಕಿ ನಿಗಮದ ಹಗರಣ ಮತ್ತು ಮೂಡಾ ಹಗರಣ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಮೂಡಾದಲ್ಲಿ ಸಿದ್ದರಾಮಯ್ಯನವರ ಕುಟುಂಬ ಪಡೆದ 14 ನಿವೇಶನಗಳು ಮೂಡಾಕ್ಕೆ ವಾಪಸ್ ಬರಬೇಕು.  ಬಡವರಿಗೆ ಹಂಚಿಕೆ ಆಗಬೇಕು. ಮೂರರಿಂದ ನಾಲ್ಕು ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳನ್ನು ಮನಸೋ ಇಚ್ಛೆ ಕೊಡಲಾಗಿದೆ. ಸ್ವತಃ ಸಿದ್ದರಾಮಯ್ಯನವರೇ ನೇಮಿಸಿದ ಮೂಡಾ ಅಧ್ಯಕ್ಷ ಮರಿಗೌಡರೇ ಇದನ್ನು ಬಾಯಿ ಬಿಟ್ಟಿದ್ದಾರೆ ಎಂದು ಹೇಳಿದರು.

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಅದನ್ನು ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು.  ಮದ್ಯ ಖರೀದಿಯೂ ಮಾಡಿದ್ದನ್ನು ಇ.ಡಿ. ಉಲ್ಲೇಖಿಸಿದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: muda scam, CM, Siddaramaiah, BJP, BY Vijayendra