Saturday, September 19, 2026

BDA Apartments

ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ BDA JK_Adv BDA Adv
Home Front Page ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ

ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ

ಮೈಸೂರು,ಜುಲೈ,29,2024 (www.justkannada.in):  ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಬಿನ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಸಮರ್ಪಿಸಿದರು. ಈ ವೇಳೆ ಮೈಸೂರು ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಾಗಿನ ಸಮರ್ಪಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ . ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬೇಕಿತ್ತು. ಈಗ ಕಬಿನಿ ಡ್ಯಾಂ ತುಂಬಿದೆ ತಮಿಳುನಾಡಿಗೆ ನೀರು ಬಿಡಲಾಗಿದೆ ಎಂದರು.

ಇಂದು ಬೆಳಿಗ್ಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆಆರ್ ಎಸ್  ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದ್ದರು.

Key words:  CM, Siddaramaiah, bagina, Kabini Reservoir