Wednesday, August 12, 2026

BDA Apartments

Home Front Page ನಾಳೆ ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಮಳೆಹಾನಿ ಪ್ರದೇಶ ಪರಿಶೀಲನೆ

ನಾಳೆ ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಮಳೆಹಾನಿ ಪ್ರದೇಶ ಪರಿಶೀಲನೆ

ಕೊಡಗು,ಆಗಸ್ಟ್,1,2024 (www.justkannada.in):  ಈ ಭಾರಿ ಮಳೆರಾಯನ ಆರ್ಭಟ ಜೋರಾಗಿದ್ದು, ಧಾರಾಕಾರ ಮಳೆಗೆ ತತ್ತರಿಸಿರುವ ಕೊಡಗು ಜಿಲ್ಲೆಗೆ  ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ  ಕೊಡಗು ಜಿಲ್ಲೆ ಪೊನ್ನಂಪೇಟರ ತಾಲ್ಲೂಕಿನ ಶ್ರೀಮಂಗಲಕ್ಕೆ ಭೇಟಿ ನೀಡಿ ಮಳೆಹಾನಿ ಪರಿಶೀಲಿಸಲಿದ್ದಾರೆ.

ನಂತರ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರಿನಲ್ಲಿ ಸಂಭವಿಸಿರುವ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ.  ನಂತರ ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿನ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆಗೆ ಮಡಿಕೇರಿಯಲ್ಲಿ ಸುದರ್ಶನ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ನಂತರ ಸಿಎಂ ಸಿದ್ದರಾಮಯ್ಯ ಕುಶಾಲನಗರ ತಾಲ್ಲೂಕಿನ ಮಾದಾಪಟ್ಟಣದಲ್ಲಿ ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಸಂಜೆ 6.30ಕ್ಕೆ  ಮೈಸೂರಿಗೆ ಆಗಮಿಸಿ ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Key words: CM Siddaramaiah, visit , Kodagu, tomorrow