Sunday, August 23, 2026

BDA Apartments

Home Crime ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣು

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣು

ರಾಮನಗರ,ಆಗಸ್ಟ್,5,2024 (www.justkannada.in): ಪಿಎಸ್ ಐ ಪರಶುರಾಮ್  ಅನುಮಾನಸ್ಪದ ಸಾವು ಬಳಿಕ ಇದೀಗ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಬಿಡದಿ ಬಳಿ ನಡೆದಿದೆ.

ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಅವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.  ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಿಮ್ಮೇಗೌಡ 2 ತಿಂಗಳ ಹಿಂದಷ್ಟೆ ಸಿಸಿಬಿಗೆ ವರ್ಗಾವಣೆಯಾಗಿದ್ದರು. ಇದೀಗ ಮರಕ್ಕೆ ನೇಣುಬಿಗಿದುಕೊಂಡು ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Key words: Bangalore, CCB, police inspector, commits suicide