Sunday, August 23, 2026

BDA Apartments

Home Front Page ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಬಿಜೆಪಿ ಜೆಡಿಎಸ್ ಪಾದಯಾತ್ರೆ- ಸಚಿವ ಕೃಷ್ಣಬೈರೇಗೌಡ

ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಬಿಜೆಪಿ ಜೆಡಿಎಸ್ ಪಾದಯಾತ್ರೆ- ಸಚಿವ ಕೃಷ್ಣಬೈರೇಗೌಡ

ಬೆಂಗಳೂರು,ಆಗಸ್ಟ್ ,5, 2024 (www.justkannada.in):  ಮುಡಾ ಹಗರಣ ವಿರೋಧಿಸಿ ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ,  ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಬಿಜೆಪಿ ಜೆಡಿಎಸ್ ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆ ನಡೆಸಿ ಜನರ ಗಮನವನ್ನು ಬೇರೆಡೆ  ಸೆಳೆಯುತ್ತಿದ್ದಾರೆ.  ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿ  ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಸಾಕು  ಎಂದರು.

ಬಿಜೆಪಿ-ಜೆಡಿಎಸ್ ಒಟ್ಟಾಗಿ ಆಪರೇಷನ್ ಮಾಡಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿದ್ದಾರೆ.  ಸರ್ಕಾರ ಬೀಳಿಸೋದನ್ನೇ ಇವರು ರಾಜ್ಯದ ಅಭಿವೃದ್ಧಿ ಎಂದು ತಿಳಿದಿರುವ ಹಾಗಿದೆ. ಸರ್ಕಾರ ಬೀಳಿಸೋದು ಇರಲಿ, ಕೇಂದ್ರದಿಂದ ಯಾವೆಲ್ಲಾ ಯೋಜನೆಯನ್ನ ಇವರು ರಾಜ್ಯಕ್ಕೆ ತಂದಿದ್ದಾರೆ? ಇವರಿಂದ ರಾಜ್ಯಕ್ಕೆ ಕೊಡುಗೆ ಏನು? ಮೊದಲು ತಿಳಿಸಲಿ ಎಂದು ಸಚಿವ ಕೃಷ್ಣಭೈರೇಗೌಡ ಸವಾಲು ಹಾಕಿದರು.

Key words: BJP, JDS, padayatra, Minister, Krishnabaire Gowda