Friday, August 14, 2026

BDA Apartments

Home Front Page ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೆಸೆಯಬೇಕೆಂಬ ಸಂಕಲ್ಪದಿಂದ ಪಾದಯಾತ್ರೆ- ಬಿವೈ ವಿಜಯೇಂದ್ರ

ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೆಸೆಯಬೇಕೆಂಬ ಸಂಕಲ್ಪದಿಂದ ಪಾದಯಾತ್ರೆ- ಬಿವೈ ವಿಜಯೇಂದ್ರ

ಮಂಡ್ಯ,ಆಗಸ್ಟ್,6,2024 (www.justkannada.in):ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನ ಕಿತ್ತೆಸೆಯಬೇಕೆಂಬ ಸಂಕಲ್ಪದಿಂದ ಪಾದಯಾತ್ರೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಬಿಜೆಪಿ ಜೆಡಿಎಸ್ ನಿಂದ  ಮೈಸೂರು ಚಲೋ ಪಾದಯಾತ್ರೆಯ ನಾಲ್ಕನೇ ದಿನ ಪಾಲ್ಗೊಂಡು  ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿರುವುದು ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದರು. ಆದರೆ ರಾಜ್ಯದ ಅಭಿವೃದ್ದಿ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ವಿದ್ಯುತ್ ದರ, ಹಾಲಿನ ದರ ಹೆಚ್ಚಿಸಿದ್ದಾರೆ. ಆದರೆ  ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು  ಬಿವೈ ವಿಜಯೇಂದ್ರ ಕಿಡಿ ಕಾರಿದರು.

Key words: Padayatra, corrupt, Congress, government, BY Vijayendra