Sunday, September 13, 2026

BDA Apartments

ಬಿಜೆಪಿಯವರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರ ಕೊಡಲಿ-ಸಚಿವ ಎಂ.ಬಿ ಪಾಟೀಲ್ BDA J...
Home Front Page ಬಿಜೆಪಿಯವರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರ ಕೊಡಲಿ-ಸಚಿವ ಎಂ.ಬಿ ಪಾಟೀಲ್

ಬಿಜೆಪಿಯವರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರ ಕೊಡಲಿ-ಸಚಿವ ಎಂ.ಬಿ ಪಾಟೀಲ್

ಶಿವಮೊಗ್ಗ ಆಗಸ್ಟ್ 10,2024 (www.justkannada.in): ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವ ಬಿಜೆಪಿಗೆ ಟಾಂಗ್ ಕೊಟ್ಟಿರುವ ಬೃಹತ್ ಕೈಗಾರಿಕ ಸಚಿವ ಎಂ.ಬಿ ಪಾಟೀಲ್ , ಬಿಜೆಪಿಯವರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರ ಕೊಡಲಿ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ , ಬಿಎಸ್ ಯಡಿಯೂರಪ್ಪ ವಿರುದ್ದ ಅವರ ಪಕ್ಷದ ಶಾಸಕರೇ ಆದ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ವಿಜಯೇಂದ್ರ‌ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪ ಮಾಡ್ತಾರೆ. ಅಲ್ಲದೆ ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.  ಹೀಗಾಗಿ ಬಿಜೆಪಿ ಮೊದಲು ಯತ್ನಾಳ್ ಆರೋಪಕ್ಕೆ ಮೊದಲು ಉತ್ತರ ಕೊಡಲಿ ನಂತರ ಮುಡಾ ಹಗರಣದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.

ಸಿಎಂ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲು ಆಗುತ್ತಿಲ್ಲ.  ಹೀಗಾಗಿ ಬಿಜೆಪಿಯವರು ವಿನಾಃ ಕಾರಣ ಹೋರಾಟ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಆರೋಪಿಸಿದರು.

Key words: BJP, first response, Yatnal,  allegation, MB Patil