Sunday, August 2, 2026

BDA Apartments

Home Front Page ಡಿಸಿಎಂ ಡಿಕೆಶಿ ಅವರೇ ಇದೇನಾ ನಿಮ್ಮ ಬ್ಯ್ರಾಂಡ್ ಬೆಂಗಳೂರು? ಜೆಡಿಎಸ್ ಕಿಡಿ

ಡಿಸಿಎಂ ಡಿಕೆಶಿ ಅವರೇ ಇದೇನಾ ನಿಮ್ಮ ಬ್ಯ್ರಾಂಡ್ ಬೆಂಗಳೂರು? ಜೆಡಿಎಸ್ ಕಿಡಿ

ಬೆಂಗಳೂರು, ಆಗಸ್ಟ್​,12,2024 (www.justkannada.in):   ರಾಜ್ಯರಾಜಧಾನಿ  ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಜಲಾವೃತವಾಗಿ, ಅಂಡರ್​ ಪಾಸ್​ಗಳಲ್ಲಿ ನೀರು ನಿಂತಿದೆ. ಹಲವು ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ ಜನರು ಪರದಾಟ ನಡೆಸಿದ್ದಾರೆ. ಈ ವಿಚಾರ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಗೆ ಜೆಡಿಎಸ್ ಘಟಕ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್ , ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು? ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ!  ಡಿಸಿಎಂ ಡಿಕೆ ಶಿವಕುಮಾರ್ ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಎಂದು ಕೆಂಡಕಾರಿದೆ.

ಕೇವಲ 3-4 ಗಂಟೆ ಸುರಿದ ಮಳೆಗೆ ಬೆಂಗಳೂರು ಬಹುತೇಕ ಜಲಾವೃತವಾಗಿದೆ. ರಾಜಧಾನಿಯ ಹಲವೆಡೆ ಮನೆಗಳಿಗೆ, ಅಪಾರ್ಟ್ ಮೆಂಟ್​ಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುತಿದ್ದಾರೆ. ಇನ್ನು ಸಿಲಿಕಾನ್ ಸಿಟಿಯ ಬಹುತೇಕ ರಸ್ತೆಗಳು, ಅಂಡರ್ ಪಾಸ್​ಗಳು ಸ್ವಿಮ್ಮಿಂಗ್ ಪೂಲ್ ಆಗಿದೆ, ರಸ್ತೆಗಳು ಕೆರೆಯಂತಾಗಿದ್ದು, ಹಳ್ಳ, ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಚಲಿಸುವುದು ವಾಹನ ಸವಾರರಿಗೆ ನರಕ ಸದೃಶ್ಯವಾಗಿದೆ.ಬೆಂಗಳೂರು ನಗರಾಭಿವೃದ್ಧಿ ಸಚಿವರೇ ಆಸ್ತಿ ತೆರಿಗೆ ಏರಿಸಿ, ಸಾವಿರ ಕೋಟಿಗೂ ಹೆಚ್ಚು ಸಂಗ್ರಹಿಸಿರುವ ಹಣ ಏನಾಗಿದೆ? ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಮಾಡಲು ನೀವು ತೋರಿದ ಉತ್ಸಾಹ, ಈಗ ‘ ಬ್ರ್ಯಾಂಡ್ ಬೆಂಗಳೂರು’ ಮಾಡ್ತೀವಿ ಎಂದು ಬರೀ ಸುಳ್ಳುಗಳನ್ನು ಹೇಳುತ್ತಲೇ ಬೆಂಗಳೂರಿನ ಜನರಿಗೆ ಮಂಕುಬೂದಿ ಎರಚುತ್ತಿದ್ದೀರಿ ಅಷ್ಟೇ. ನಿಮ್ಮ ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲೇ ಮುಳುಗಿರುವಾಗ ಜನಸಮಾನ್ಯರ ಬಗ್ಗೆ ಯೋಚಿಸಲು ಸಮಯ ಎಲ್ಲಿದೆ? ಎಂದು ಜೆಡಿಎಸ್ ಟ್ವೀಟ್ ಮಾಡಿ ಹರಿಹಾಯ್ದಿದೆ.

Key words: DCM, DK Shivakumar, brand Bangalore, JDS