Sunday, August 16, 2026

BDA Apartments

Home Front Page ಪರೀಕ್ಷಾರ್ಥಿಗಳನ್ನೆ ಚಿತ್ರಹಿಂಸೆಗೊಳಪಡಿಸಿ ಪರೀಕ್ಷೆ ನಡೆಸುವ ಆತುರದ ದುರುದ್ದೇಶವದ್ರೂ ಏನು? KPSC ವಿರುದ್ದ ಹೆಚ್.ಡಿಕೆ ಆಕ್ರೋಶ

ಪರೀಕ್ಷಾರ್ಥಿಗಳನ್ನೆ ಚಿತ್ರಹಿಂಸೆಗೊಳಪಡಿಸಿ ಪರೀಕ್ಷೆ ನಡೆಸುವ ಆತುರದ ದುರುದ್ದೇಶವದ್ರೂ ಏನು? KPSC ವಿರುದ್ದ ಹೆಚ್.ಡಿಕೆ ಆಕ್ರೋಶ

ಬೆಂಗಳೂರು,ಆಗಸ್ಟ್,15,2024 (www.justkannada.in): ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಮುಂದಾಗಿರುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು?  ಎಂದು ಪ್ರಶ್ನಿಸಿರುವ ಹೆಚ್.ಡಿಕೆ, ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ರಾಜ್ಯ ಕಾಂಗ್ರೆಸ್  ಸರಕಾರ ಹಾಗೂ KPSC ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಹೆಚ್.ಡಿಕೆ ಆಗ್ರಹಿಸಿದ್ದಾರೆ.

Key words: KPSC, KAS, Exam, Central Minister, HDK