Sunday, August 23, 2026

BDA Apartments

Home Front Page ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ನಾಳೆ ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ IMA ಕರೆ

ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ನಾಳೆ ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ IMA ಕರೆ

ಕೊಲ್ಕತ್ತಾ,ಆಗಸ್ಟ್,16,2024 (www.justkannada.in): ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನ ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು, ನಾಳೆ (ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಅವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ತುರ್ತು ಸೇವೆ ಹೊರತುಪಡಿಸಿ ಬೇರೆಯಾವ ಸೌಲಭ್ಯ ಇರುವುದಿಲ್ಲ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಭಾರತೀಯ ವೈದ್ಯಕೀಯ ಸಂಘವು, ಆಗಸ್ಟ್‌ 17 ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಲಾಗಿದೆ. ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6 ರವರೆಗೆ ವೈದ್ಯಕೀಯ ಸೇವೆಗಳನ್ನು ಹಿಂಪಡೆಯಲಾಗುತ್ತದೆ. ಈ ಅವಧಿಯಲ್ಲಿ, ಅಗತ್ಯ ಸೇವೆಗಳು ಕಾರ್ಯನಿರ್ವಹಿಸುತ್ತವೆ, ಆದರೆ ಶಸ್ತ್ರಚಿಕಿತ್ಸೆಗಳು ಮತ್ತು ಹೊರರೋಗಿ ವಿಭಾಗಗಳನ್ನು (OPD) ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದೆ.

ಆ.17ರ ಬೆಳಗ್ಗೆ 6ರಿಂದ ಆ.18ರ ಬೆಳಗ್ಗೆ 6ರವರೆಗೆ ಬಹುತೇಕ ಸೇವೆಗಳು ಲಭ್ಯವಿರುವುದಿಲ್ಲ. ಇದು ಸಾರ್ವಜನಿಕರ ಗಮನದಲ್ಲಿರಲಿ ಎಂದು ನಾವು ತಿಳಿಸುತ್ತಿದ್ದೇವೆ ಎಂದು ಐಎಂಎ ಪ್ರಕಟಣೆಯಲ್ಲಿ ತಿಳಿಸಿದೆ.

Key words: doctor, Rape, murder case, IMA calls, strike