Friday, September 18, 2026

BDA Apartments

Home Front Page ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್,19,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಇಂದು  ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪರ ವಕೀಲ ಶತಾಭಿಷ್ ಶಿವಣ್ಣ ಅವರು  ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ನಿರ್ಧಾರದ ವಿರುದ್ದ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Key words: CM Siddaramaiah, High Court, Governor, permission, prosecution