Sunday, August 2, 2026

BDA Apartments

Home Crime ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್: ಆರೋಪಿ ಬಂಧನ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್: ಆರೋಪಿ ಬಂಧನ

ಬೆಂಗಳೂರು, ಆಗಸ್ಟ್​.19,2024 (www.justkannada.in): ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಳೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆಡುಗೋಡಿಯ ಚಂದ್ರಪ್ಪ ನಗರ  ನಿವಾಸಿ ಮುಖೇಶ್ವರನ್ ಬಂಧಿತ ಆರೋಪಿ ಎನ್ನಲಾಗಿದೆ. ಕೊರಿಯೋಗ್ರಾಫರ್ ಆಗಿರುವ ಅತ್ಯಾಚಾರ ಆರೋಪಿ ನಿನ್ನೆ ಕೋರಮಂಗಲ ಪಬ್​ಗೆ ಪಾರ್ಟಿಗೆ ಬಂದಿದ್ದ. ಮನೆಗೆ ತೆರಳುವಾಗ ಯುವತಿ‌ ಡ್ರಾಪ್ ಕೇಳಿದ್ದಾಳೆ. ಯುವತಿ ಕೂಡ ಕೋರಮಂಗಲದ ಪಬ್​ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು.

ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಅಲ್ಲದೆ ಇದೇ ವೇಳೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಮನೆಗೆ ಬಂದಿದ್ದ.  ಇದೀಗ ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

Key words: Student, rape case,  Accused, arrested