Sunday, August 2, 2026

BDA Apartments

Home Front Page ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಕಿಡಿ: ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಕಿಡಿ: ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ.

ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು  ಬೃಹತ್ ಹೋರಾಟ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಮುಖಂಡರು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.  ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆ ಜಾಥಾ  ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೆಯೇ ಬಾಗಲಕೋಟೆ ಬೇವೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಟೈರ್ ಗೆ ಬೆಂಕಿ ಹಚ್ಚಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ,  ದಾವಣಗೆರೆ, ಹಾವೇರಿ, ಕೋಲಾರದಲ್ಲಿ ಧರಣಿ ನಡೆಯುತ್ತಿದೆ. ಒಟ್ಟಾರೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಕಾಂಗ್ರೆಸ್ ನಿಂದ ಆಕ್ರೋಶ ರಾಜ್ಯಾದ್ಯಂತ ವ್ಯಕ್ತವಾಗಿದೆ.

Key words: prosecution, against, CM, Congress, protest