Tuesday, August 18, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ, ಜೆಡಿಎಸ್ ನಾಯಕರ ಜಂಟಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ, ಜೆಡಿಎಸ್ ನಾಯಕರ ಜಂಟಿ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇದೀಗ ಇಂದು  ಬಿಜೆಪಿ ಜೆಡಿಎಸ್ ನಾಯಕರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ವಿಪಕ್ಷ ನಾಯಕ ಆರ್.ಅಶೋಕ್,  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಧರಣಿ ನಡೆಸಿದರು. ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಎಂಎಲ್ ಸಿಗಳಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ,  ಶಾಸಕ ಅರವಿಂದ ಬೆಲ್ಲದ್, ಸಂಸದ ಪಿಸಿ ಮೋಹನ್, ಶಾಸಕ ಅರಗ ಜ್ಞಾನೇಂದ್ರ,  ಲೇಹರ್ ಸಿಂಗ್, ಕೃಷ್ಣಾರೆಡ್ಡಿ ಜೆಡಿಎಸ್ ಶಾಸಕರು ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಿಎಂ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಇತ್ತ  ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ಮಾಡುತ್ತಿದೆ.

Key words: CM Siddaramaiah, resignation, protest, BJP, JDS leaders