Sunday, August 2, 2026

BDA Apartments

Home Front Page ಜೆಡಿಎಸ್ ಬಿಜೆಪಿ ಪಾದಯಾತ್ರೆ ಯಶಸ್ವಿ: ಮುಂದೆಯೂ ಒಂದಾಗಿ ಹೋರಾಟ- ಶಾಸಕ ಜಿ.ಟಿ ದೇವೇಗೌಡ

ಜೆಡಿಎಸ್ ಬಿಜೆಪಿ ಪಾದಯಾತ್ರೆ ಯಶಸ್ವಿ: ಮುಂದೆಯೂ ಒಂದಾಗಿ ಹೋರಾಟ- ಶಾಸಕ ಜಿ.ಟಿ ದೇವೇಗೌಡ

ಮೈಸೂರು,ಆಗಸ್ಟ್,19,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಬಿಜೆಪಿ ಪಾದಯಾತ್ರೆ ಯಶಸ್ವಿ: ಮುಂದೆಯೂ ಒಂದಾಗಿ ಹೋರಾಟ ಮಾಡುತ್ತೇವೆ ಎಂದರು.

ಶಾಸಕ ಜಿ.ಟಿ ದೇವೇಗೌಡ  ಇಂದು ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ಬಿಜೆಪಿ ಜೆಡಿಎಸ ಪಾದಯಾತ್ರೆ ಯಶಸ್ವಿಯಾಗಿದೆ.  ಮುಂದಿನ ದಿನಗಳಲ್ಲೂ ಬಿಜೆಪಿ ಜೆಡಿಎಸ್  ಒಂದಾಗಿ ಹೋರಾಟ ಮಾಡುತ್ತೆ. ಮುಡಾ ಪ್ರಕರಣದ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ. ಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ನೋಡಬೇಕಿದೆ ಎಂದರು.

Key words: JDS ,BJP, padayatra, successful,MLA, GT Deve Gowda