Friday, September 11, 2026

BDA Apartments

Home Front Page ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲಿ ಬಹಳ ಮಂದಿ...

ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲಿ ಬಹಳ ಮಂದಿ ಇದ್ದಾರೆ-ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,21,2024 (www.justkannada.in):  ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ನಿಮ್ಮ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ಕೊಟ್ಟಿದ್ದಾರೆ.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಡಿಸಿಎಂ ಡಿಕೆ ಶಿವಕುಮಾರ್  ಮತ್ತು ಶಾಸಕರು ಹೇಳಿದ್ದಾರೆ.  ಈ ಸಂಬಂಧ ಟ್ವೀಟ್ ಮಾಡಿ ವ್ಯಂಗ್ಯವಾಡಿರುವ ಆರ್.ಅಶೋಕ್,  ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ .

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತೃಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ.

ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.

Key words: Muda scam, CM Siddaramaiah, R.Ashok, tweet