Wednesday, August 12, 2026

BDA Apartments

Home Front Page ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಆಗಸ್ಟ್, 21,2024(www.justkannada.in) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪೋಸ್ಟ್ ಮೆಟ್ರಿಕ್  ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನ ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯನ್ನು ಪಡೆಯಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ Link: (https://ssp.postmatric.karnataka.gov.in/) ದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ. 03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application, disabilities students, scholarship