Friday, July 31, 2026

BDA Apartments

Home Crime ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್: 300 ಪುಟಗಳ ಚಾರ್ಚ್ ಶೀಟ್ ಸಲ್ಲಿಕೆ

ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್: 300 ಪುಟಗಳ ಚಾರ್ಚ್ ಶೀಟ್ ಸಲ್ಲಿಕೆ

ಬೆಂಗಳೂರು,ಆಗಸ್ಟ್,22,2024 (www.justkannada.in): ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಶಿವಮೊಗ್ಗ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಅಧಿಕಾರಿಗಳಾದ ಪದ್ಮನಾಭ್, ಪರುಶರಾಮ್ ಅವರ ಒತ್ತಡದಿಂದ ಮನನೊಂದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ನಂತರ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತು ಮಾಡಲಾಗಿತ್ತು.

ಈ ಸಂಬಂಧ ಚಂದ್ರಶೇಖರ್ ಅವರ ಪತ್ನಿ  ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Key words: Valmiki Corporation, Officer, Suicide Case, Charge Sheet