Saturday, August 1, 2026

BDA Apartments

Home Crime ರೇಣುಕಾಸ್ವಾಮಿ ಕೊಲೆ ಕೇಸ್; ಪವಿತ್ರಾಗೌಡ ಜಾಮೀನು ಆರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪವಿತ್ರಾಗೌಡ ಜಾಮೀನು ಆರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಆಗಸ್ಟ್,22,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಿತ್ತು.

ಇಂದು ಜಾಮೀನು ಅರ್ಜಿಗೆ ಎಸ್ ಪಿಪಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲಾಗಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 27ಕ್ಕೆ ಮುಂದೂಡಿ ಜಡ್ಜ್ ಜೈಶಂಕರ್  ಆದೇಶಿಸಿದ್ದಾರೆ. ಎ7 ಆರೋಪಿ ಮನುಕುಮಾರ್ ಜಾಮೀನು ಅರ್ಜಿಯನ್ನೂ ಕೂಡ ಮುಂದೂಡಲಾಗಿದೆ.

Key words: Pavitra Gowda, bail, application, adjourned