Wednesday, August 12, 2026

BDA Apartments

Home Crime ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ : ಹೆಚ್.ಡಿ ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ : ಹೆಚ್.ಡಿ ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಆಗಸ್ಟ್,30,2024 (www.justkannada.in): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ಕೇಸ್ ಸಂಬಂಧ ಕೆಆರ್ ನಗರದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣವನ್ನ ರದ್ದುಗೊಳಿಸುವಂತೆ ಕೋರಿ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಿದೆ.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಅರ್ಜಿಯ ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19 ಕ್ಕೆ ಹೈಕೋರ್ಟ್ ಮುಂದೂಡಿದೆ.

ವಿಚಾರಣಾ ನಾಯ್ಯಾಲಯ ಸೆಕ್ಷನ್ 364ಎ ಪರಿಜ್ಞಾನಕ್ಕೆ ಪಡೆದಿಲ್ಲ.  ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನೂ ಪ್ರಶ್ನಿಸಲಾಗಿಲ್ಲ ಎಂದು ಎಸ್ ಪಿಪಿ ರವಿವರ್ಮಾ ಕುಮಾರ್ ಹೇಳಿದರು.

ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ. ರೇವಣ್ಣಗೆ ಮಂಜೂರಾಗಿದ್ದ ಜಾಮೀನು  ರದ್ದು ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.

Key words: woman, Kidnapping case, HD Revanna, application, Adjournment