Thursday, August 6, 2026

BDA Apartments

Home Front Page ಸಿಎಂ ವಿರುದ್ದ ಷಡ್ಯಂತ್ರದಲ್ಲಿ ರಾಜ್ಯಪಾಲರೇ ಭಾಗಿ: ಇದು ರಾಜ್ಯಕ್ಕೆ ಮಾಡಿದ ದ್ರೋಹ-ಸಚಿವ ದಿನೇಶ್ ಗುಂಡೂರಾವ್

ಸಿಎಂ ವಿರುದ್ದ ಷಡ್ಯಂತ್ರದಲ್ಲಿ ರಾಜ್ಯಪಾಲರೇ ಭಾಗಿ: ಇದು ರಾಜ್ಯಕ್ಕೆ ಮಾಡಿದ ದ್ರೋಹ-ಸಚಿವ ದಿನೇಶ್ ಗುಂಡೂರಾವ್

ಮಂಗಳೂರು,ಆಗಸ್ಟ್,30,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ದ ನಡೆಯುತ್ತಿರುವ ಷಡ್ಯಂತ್ರದಲ್ಲಿ ರಾಜ್ಯಪಾಲರೂ ಭಾಗಿಯಾಗಿದ್ದಾರೆ. ಇದು ರಾಜ್ಯಕ್ಕೆ ಮಾಡಿದ ದ್ರೋಹ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಾಸಿಕ್ಯೂಷನ್ ಬಗ್ಗೆ ನ್ಯಾಯಾಲಯ ತೀರ್ಮಾನ ಮಾಡುತ್ತೆ.  ಆದ್ರೆ ರಾಜ್ಯಪಾಲರು ಯಾವ ರೀತಿ ಪಕ್ಷಪಾತ ಮಾಡಿದ್ದಾರೆಂದು ರಾಜ್ಯದ ಜನತೆಗೆ ಗೊತ್ತಿದೆ. ತರಾತುರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ  ಯಾವುದೆ ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ ಭ್ರಷ್ಟಾಚಾರ ಮಾಡಿಲ್ಲ ಎಂದರು.

ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಸುಳ್ಳನ್ನು ಸತ್ಯ ಮಾಡುವುದೇ ಆರ್.ಎಸ್.ಎಸ್ ನ ತರಬೇತಿಯಾಗಿದೆ. ಆರ್ ಎಸ್ ಎಸ್ ಇದನ್ನೇ ತರಬೇತಿ ಕೊಡುತ್ತಾರೆ, ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂದು ತರಬೇತಿ ನೀಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೇ ತರಬೇತಿ ಇರುತ್ತದೆ. ಅದನ್ನೇ ಇಲ್ಲಿ ಸಹ ಮಾಡಲು ಹೊರಟಿದ್ದಾರೆ. ನಮಗೆ ಯಾವುದೇ ಭಯ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Key words: Governor, muda case, CM, Minister, Dinesh Gundurao