Friday, August 28, 2026

BDA Apartments

Home Front Page ಸಿಎಂ ವಿರುದ್ದ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಷ್ಟ್ರಪತಿ ಎಂಟ್ರಿ: ರಾಜ್ಯ ಸಿಎಸ್ ಗೆ ಪತ್ರ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಷ್ಟ್ರಪತಿ ಎಂಟ್ರಿ: ರಾಜ್ಯ ಸಿಎಸ್ ಗೆ ಪತ್ರ

ಬೆಂಗಳೂರು,ಆಗಸ್ಟ್,31,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಎಂಟ್ರಿಯಾಗಿದೆ.

ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಸಂಬಂಧ ಕೆಪಿಸಿಸಿ ಮಾಧ್ಯಮ ವಿಭಾಗದ ವಕ್ತಾರ ರಮೇಶ್ ಬಾಬು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದರು.

ಈ ದೂರಿನ ಕುರಿತು ರಾಷ್ಟ್ರಪತಿಗಳಿಂದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು, ರಮೇಶ್ ಬಾಬು ಅವರ ದೂರಿನ ಬಗ್ಗೆ ಸೂಕ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: President, Entry, Prosecution, Against, CM, Letter