Friday, September 18, 2026

BDA Apartments

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ BDA JK_Adv BDA Adv
Home Crime ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು,ಆಗಸ್ಟ್,31,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣ ಸಂಬಂಧ ಎ7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನೂ ಕೂಡ ಕೋರ್ಟ್ ವಜಾಗೊಳಿಸಿದೆ.  ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್‌ ವಾದ ಮಂಡಿಸಿದ್ದರು.

ಇಂದು  ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯ ತಿರಸ್ಕೃತಗೊಳಿಸಿ ಕೋರ್ಟ್ ಆದೇಶಿಸಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಹಾಗೂ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್‌ ಈಗಾಗಲೇ ಸೆಪ್ಟೆಂಬರ್‌ 9ವರೆಗೂ ವಿಸ್ತರಿಸಿದೆ.

Key words: Renukaswamy, murder case,  Pavitra Gowda, bail application,  dismissed