Wednesday, July 29, 2026

BDA Apartments

Home Front Page ರೇಣುಕಾಸ್ವಾಮಿ ಕೊಲೆ ಕೇಸ್: ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ ದಯಾನಂದ್

ರೇಣುಕಾಸ್ವಾಮಿ ಕೊಲೆ ಕೇಸ್: ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರು,ಸೆಪ್ಟಂಬರ್,3,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್,  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ. ಇನ್ನೂ ಕೆಲವು ಎಫ್ ಎಸ್ ಎಲ್ ವರದಿಗಳು ಬರಬೇಕಿದೆ.  ರಾಜ್ಯ ಎಫ್ ಎಸ್ ಎಲ್  ನಿಂದ ವರದಿಗಳು ಬಂದಿವೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧವಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಚಾರ್ಜ್‌ಶೀಟ್ ನೀಡಿ ಅವರಿಂದ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್ ನೋಡಿರುವ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್​ನ ವಿಧಿ ವಿಜ್ಞಾನ ಪ್ರಯೋಗಾಲದಿಂದ ಇನ್ನೂ ಹಲವು ವರದಿಗಳು ನಮ್ಮ ಕೈಸೇರಬೇಕಿದೆ. ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು  ದಯಾನಂದ್ ಅವರು ತಿಳಿಸಿದರು.

Key words: Renukaswamy, murder case, Charge sheet,Police Commissioner, Dayanand